- Advertisement -


- Advertisement -
ಬಂಟ್ವಾಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನವನ್ನು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಿ.ಸಿ.ರೋಡ್ನ ಕರಾವಳಿ ಸರ್ವೀಸ್ ಸ್ಟೇಷನ್ ಸಮೀಪ ಈ ಘಟನೆ ನಡೆದಿದೆ.
ದನ ಬಾವಿಗೆ ಬಿದ್ದಿರುವ ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಹಗ್ಗ ಹಾಗೂ ಅಗತ್ಯ ಸುರಕ್ಷತಾ ಸಾಧನಗಳ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಬಳಿಕ ಬಾವಿಯೊಳಗೆ ಸಿಲುಕಿದ್ದ ದನವನ್ನು ಅತ್ಯಂತ ಎಚ್ಚರಿಕೆಯಿಂದ ಮೇಲಕ್ಕೆತ್ತಿ ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾದರು.
ಸಿಬ್ಬಂದಿಯ ಸಮಯಪ್ರಜ್ಞೆ, ಧೈರ್ಯ ಮತ್ತು ತಂಡದ ಸಂಘಟಿತ ಕಾರ್ಯಾಚರಣೆಯಿಂದ ದನದ ಜೀವ ಉಳಿದಿದೆ. ಅಗ್ನಿಶಾಮಕ ದಳದ ಈ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Advertisement -


