- Advertisement -


- Advertisement -
ಮಂಜೇಶ್ವರ: ಇಲ್ಲಿನ ಉಪ್ಪಳ ಮುಸೋಡಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ದೋಣಿಯ ಇಂಜಿನ್ ಕೆಟ್ಟುಹೋಗಿ, ಸಮುದ್ರದ ಮಧ್ಯೆ ಅಪಾಯದಲ್ಲಿದ್ದ ನಾಲ್ವರು ಬೆಸ್ತರನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ.
ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಕುಂಬಳೆಯ ಕರಾವಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇವರನ್ನು ಪಾರು ಮಾಡಿದ್ದಾರೆ.
ಭಾನುವಾರ ಬೆಳಗ್ಗೆ ಮುಸೋಡಿ ತೀರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಹಠಾತ್ ಇಂಜಿನ್ ದೋಷ ಕಾಣಿಸಿಕೊಂಡು, ದೋಣಿ ಸಮುದ್ರದಲ್ಲೇ ಸಿಲುಕಿಕೊಂಡಿತ್ತು. ತಕ್ಷಣವೇ ಎಚ್ಚೆತ್ತ ಮೀನುಗಾರರು ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸಕಾಲದಲ್ಲಿ ಸ್ಪಂದಿಸಿ, ದೋಣಿಯಲ್ಲಿದ್ದ ನಾಲ್ವರನ್ನೂ ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
- Advertisement -


