Saturday, June 29, 2024
HomeUncategorizedಉಡುಪಿ: ಭಾರೀ ಮಳೆಗೆ ಕೃಷ್ಣ ಮಠದ ಸಮೀಪ ಜನವಸತಿ ಪ್ರದೇಶಕ್ಕೆ ನುಗ್ಗಿದ ನೀರು; ನಿವಾಸಿಗಳ ಸ್ಥಳಾಂತರ

ಉಡುಪಿ: ಭಾರೀ ಮಳೆಗೆ ಕೃಷ್ಣ ಮಠದ ಸಮೀಪ ಜನವಸತಿ ಪ್ರದೇಶಕ್ಕೆ ನುಗ್ಗಿದ ನೀರು; ನಿವಾಸಿಗಳ ಸ್ಥಳಾಂತರ

spot_img
- Advertisement -
- Advertisement -

ಉಡುಪಿ: ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಅಲ್ಲದೇ, ಕೃಷ್ಣ ಮಠದ ಪಕ್ಕದಲ್ಲಿರುವ ಜನವಸತಿ ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ರಾತ್ರಿಯೇ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದು, ಉಡುಪಿ ನಗರದಲ್ಲಿ ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಹಲವು ಸ್ಥಳಗಳಲ್ಲಿ ಸಮಸ್ಯೆ ಎದುರಾಗಿದೆ.

ಈ ಮಧ್ಯೆ ಜಿಲ್ಲೆಯ ಹಲವು ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಮಳೆ ನೀರು ನುಗ್ಗಿ ಜನರು ಸಮಸ್ಯೆ ಎದುರಿಸುವಂತಾಗಿದೆ.

- Advertisement -
spot_img

Latest News

error: Content is protected !!