Saturday, May 18, 2024
HomeUncategorizedರಾಜ್ಯ ಬಿಜೆಪಿ ಕಾರ್ಯಕರ್ತರಿಂದ 700+ ಹುದ್ದೆಗಳಿಗೆ ರಾಜೀನಾಮೆ: ಬಿಜೆಪಿಯ ಮುಂದಿನ ನಿಲುವು ಏನಾಗಿರುತ್ತೆ?

ರಾಜ್ಯ ಬಿಜೆಪಿ ಕಾರ್ಯಕರ್ತರಿಂದ 700+ ಹುದ್ದೆಗಳಿಗೆ ರಾಜೀನಾಮೆ: ಬಿಜೆಪಿಯ ಮುಂದಿನ ನಿಲುವು ಏನಾಗಿರುತ್ತೆ?

spot_img
- Advertisement -
- Advertisement -

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಆಕ್ರೋಶಿತರಾದ ಪಕ್ಷದ ಜವಾಬ್ದಾರಿ ಹೊತ್ತ ಹಲವು ಪ್ರಮುಖ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡುವ ಮುಖೇನ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾರ್ಯಕರ್ತನ ಕೊಲೆಯಾದರೂ ಈ ಕೃತ್ಯದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸುಳ್ಯ, ಪುತ್ತೂರು, ವಿಟ್ಲ, ಬಂಟ್ವಾಳ, ಉಪ್ಪಿನಂಗಡಿ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ 700ಕ್ಕೂ ಹೆಚ್ಚು ಪಕ್ಷ ಜವಾಬ್ದಾರಿ ಹೊಂದಿರುವ ಪ್ರಮುಖರು ಬಿಜೆಪಿ ಪಕ್ಷದಲ್ಲಿರುವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಪಕ್ಷದ ಕಾರ್ಯಕರ್ತರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ, ‘ಹಿಂದೂ ಕಾರ್ಯಕರ್ತರ ಹತ್ಯೆಗೆ ನ್ಯಾಯ ದೊರಕಿಸಿಕೊಡುವರೆಗೆ ನಾವೂ ಬಿಜೆಪಿ ಪಕ್ಷ ಯಾವುದೇ ಕಾರ್ಯಗಳಲ್ಲಿ ಭಾಗವಹಿಸುವುದಿಲ್ಲ. ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಯಾವತ್ತೂ ಕಾರ್ಯರ್ತರ ಸಾವಿಗೆ ನ್ಯಾಯ ಒದಗಿಸಿಸುತ್ತಾರೋ, ಭಾರತಕ್ಕೆ ಮಾರಕ ಆಗಿರೋ ಜಿಹಾದಿ ಭಯೋತ್ಪಾದಕರಿಗೆ ಸರಿಯಾದ ಶಿಕ್ಷೆ ನೀಡುತ್ತೋ ಅವಾಗ ಮತ್ತೆ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯೋಕೆ ಸಿದ್ಧರಿದ್ದೇವೆ ‌ಎಂದು ಹೇಳುತ್ತಾ’ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ.

ಇನ್ನು ಹಿಂದೂ ಕಾರ್ಯಕರ್ತರ ಹತ್ಯೆಯಿಂದಾಗಿ ನೊಂದ ಕಾರ್ಯಕರ್ತರ ರಾಜೀನಾಮೆ ಪರ್ವವು, ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಯಾವ ರೀತಿಯ ನಿಲುವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

- Advertisement -
spot_img

Latest News

error: Content is protected !!