Thursday, June 4, 2026
Homeಕರಾವಳಿಉಡುಪಿಉಡುಪಿ: ಫಲಿತಾಂಶಕ್ಕೆ ಹೆದರಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಫಲಿತಾಂಶಕ್ಕೆ ಹೆದರಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಉಡುಪಿ : ಪ್ರಥಮ ಪಿಯುಸಿ ಫಲಿತಾಂಶಕ್ಕೆ ಹೆದರಿದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಗ್ಗರ್ಸೆ ಎಂಬಲ್ಲಿ ನಡೆದಿದೆ.

ತಗ್ಗರ್ಸೆ ಗ್ರಾಮದ ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುಧೀಪ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ .

ಈತ ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಎ.30ರ ಪ್ರಥಮ ಪಿಯುಸಿಯ ಫಲಿತಾಂಶದಲ್ಲಿ ತಾನು ಅನುತ್ತೀರ್ಣಗೊಳ್ಳಬಹುದು ಎಂಬ ಹೆದರಿಕೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಅಡುಗೆ ಕೋಣೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!