Wednesday, June 3, 2026
Homeತಾಜಾ ಸುದ್ದಿಮಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೀನುಗಾರಿಕಾ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕನಿಗೆ ಶಿಕ್ಷೆ...

ಮಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೀನುಗಾರಿಕಾ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕನಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಮಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕಾ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋ.ರೂ. ದಂಡ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ..

ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗಂಗಾಧರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಆರೋಪಿ ಗಂಗಾಧರ ವಿ. ಮಡ್ಡಿಕೇರಿಯ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದರು. ಅಲ್ಲದೆ ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿ 6ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

- Advertisement -

Latest News

error: Content is protected !!