Wednesday, June 24, 2026
Homeಕರಾವಳಿಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶೆ ಇಂದ್ರಕಲಾ ಬಿ. ಎಸ್ ಅಸೌಖ್ಯದಿಂದ ನಿಧನ

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶೆ ಇಂದ್ರಕಲಾ ಬಿ. ಎಸ್ ಅಸೌಖ್ಯದಿಂದ ನಿಧನ

- Advertisement -
- Advertisement -

ಮಂಗಳೂರು: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶೆ ಇಂದ್ರಕಲಾ ಬಿ. ಎಸ್. (73) ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೇ 21ರಂದು ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನಿಧನರಾಗಿದ್ದು, ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅವರು ಮಂಗಳೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದು, 2012ರಲ್ಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಅವರು ಆ ಸ್ಥಾನಕ್ಕೇರಿದ ಮೂರನೇ ಮಹಿಳೆಯಾಗಿದ್ದರು. 2013ರಲ್ಲಿ ಖಾಯಂ ನ್ಯಾಯಧೀಶರಾಗಿ ನೇಮಕಗೊಂಡು, 2014ರ ಎಪ್ರಿಲ್ ವರೆಗೆ ಕಾರ್ಯ ನಿರ್ವಹಿಸಿದ್ದರು. ಬಳಿಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆಯಾಗಿ ನಿಯುಕ್ತಿಗೊಂಡು ಕಾರ್ಯನಿರ್ವಹಿಸಿದ್ದರು. ಮಂಗಳೂರಿನ ವಾಮಂಜೂರಿನಲ್ಲಿ 1994ರಲ್ಲಿ ನಾಲ್ಕು ಮಂದಿ ಸಂಬಂಧಿಕರನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಪ್ರವೀಣ್ ಕುಮಾರ್ ಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.

- Advertisement -

Latest News

error: Content is protected !!