- Advertisement -
![]()
- Advertisement -
ಸುಳ್ಯ: ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಪುತ್ರ ಆಸ್ತಿಕ್ ರಾಘವ್ ಕೆರೆಯಲ್ಲಿ ಮುಳುಗಿ ಸಾ*ವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಮಂಗಳೂರಿನ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ದಂತ ವಿಜ್ಞಾನ ವ್ಯಾಸಂಗ ಮಾಡುತ್ತಿದ್ದ ಆಸ್ತಿಕ್ ರಾಘವ್ ಇಂದು ಕೆರೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮಂಗಳೂರಿನಿಂದ ತನ್ನ ಸಹಪಾಠಿಯೊಂದಿಗೆ ಕೇರಳದ ಕಣ್ಣೂರಿನ ಆತನ ಮನೆಗೆ ಆಸ್ತಿಕ್ ಇಂದು ಬೆಳಿಗ್ಗೆ ಹೋಗಿದ್ದರೆನ್ನಲಾಗಿದೆ. ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಕಾಲು ಜಾರಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -


