Sunday, May 19, 2024
Homeತಾಜಾ ಸುದ್ದಿಎಸ್ ಐ ಟಿ ವಿಚಾರಣೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಹೆಚ್ ಡಿ ರೇವಣ್ಣ; ಬೆಂಗಳೂರಿನ ಬೌರಿಂಗ್...

ಎಸ್ ಐ ಟಿ ವಿಚಾರಣೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಹೆಚ್ ಡಿ ರೇವಣ್ಣ; ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆ

spot_img
- Advertisement -
- Advertisement -

ಬೆಂಗಳೂರು; ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಹೆಚ್ ಡಿ ರೇವಣ್ಣ ಅವರನ್ನು ಇಂದು ಮಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.

ಮೇ. 4 ರಂದು ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿದ್ದರು. ಅಲ್ಲದೇ ನಾಲ್ಕು ದಿನಗಳ ಕಾಲ ಎಸ್ ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.  ಈ ವೇಳೆ ರೇವಣ್ಣ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ನಾನು ಯಾರನ್ನು ಕಿಡ್ನ್ಯಾಪ್ ಮಾಡಿಲ್ಲ. ಕಿಡ್ನ್ಯಾಪಿಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಒಂದೇ ಉತ್ತರ ನೀಡುತ್ತಿದ್ದರು. ಆದರೂ ಎಸ ಐ ಟಿ ಅಧಿಕಾರಿಗಳು ಬಿಡದೆ ಅವರಿಂದ ಹೇಳಿಕೆಗಳನ್ನು ಪಡೆಯಲು ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಇದರಿಂದ ಮಾನಸಿಕ ಹಾಗು ದೈಹಿಕವಾಗಿ ಎಚ್ ಡಿ ರೇವಣ್ಣ ಅವರು ಕುಗ್ಗಿದ್ದರು. ಆದ್ದರಿಂದ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿತ್ತು. ಹಾಗಾಗಿ ಇಂದು ಸೊಸೈಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!