ಧರ್ಮಸ್ಥಳ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜೈಲು ಸೇರಿ ಬಿಡುಗಡೆಯಾಗಿರುವ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಂದ ರಿಲೀಸ್ ಆದ ಬೆನ್ನಲ್ಲೇ ತಮ್ಮ ಟೆಂಪಲ್ ರನ್ ಶುರು ಮಾಡಿದ್ದರು. ಅದು ಹಾಗೇ ಮುಂದುವರೆದಿದ್ದು ಇಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ.

ಇಂದು ದೇವರ ದರ್ಶನದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ರೇವಣ್ಣ ವಾಸ್ತವ್ಯ ಹೂಡಿದ್ದರು. ಹೆಚ್.ಡಿ.ರೇವಣ್ಣ ಮೇ.26 ರಂದು ರಾತ್ರಿ ಹಾಸನದಿಂದ ಕಾರಿನ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ, ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿ ಬೆಳಗ್ಗೆ ದೇವರ ದರ್ಶನ ಮಾಡಿದರು.ಇನ್ನು ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ದೇವಳದ ಸಿಬ್ಬಂದಿ ರೇವಣ್ಣ ಅವರನ್ನು ಸ್ವಾಗತಿಸಿದರು.ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರೇವಣ್ಣ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.