Thursday, June 4, 2026
Homeತಾಜಾ ಸುದ್ದಿಮಹಿಳೆಯ ಕಿಡ್ನ್ಯಾಪ್ ಪ್ರಕರಣ ; ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಪರಪ್ಪನ ಅಗ್ರಹಾರವೇ ಗತಿ

ಮಹಿಳೆಯ ಕಿಡ್ನ್ಯಾಪ್ ಪ್ರಕರಣ ; ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಪರಪ್ಪನ ಅಗ್ರಹಾರವೇ ಗತಿ

- Advertisement -
- Advertisement -

ಬೆಂಗಳೂರು: ಮೈಸೂರಿನ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಮೇ. 4 ರಂದು ಎಸ್ ಐಟಿ ಅಧಿಕಾರಿಗಳು  ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಎಸ್ ಐಟಿ ಕೋರ್ಟ್ ಗೆ ಹಾಜರುಪಡಿಸಿ ನಾಲ್ಕು ದಿನಗಳ ಕಾಲ ಅಂದರೆ ಇಂದಿನವರೆಗೆ ಕಸ್ಟಡಿಗೆ ಪಡೆದಿತ್ತು. ಆದರೆ ಇಂದಿಗೆ ಅವರ ಎಸ್ ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ 7 ದಿನಗಳ ಕಾಲ ಅಂದರೆ ಮೇ 14ರವರೆಗೆ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ರೇವಣ್ಣ ಅವರಿಗೆ ಪರಪ್ಪನ ಅಗ್ರಹಾರವೇ ಗತಿ ಎಂಬಂತಾಗಿದೆ.

ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಕಸ್ಟಜಿ ಅಂತ್ಯಗೊಂಡ ಹಿನ್ನಲೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು. ಅವರ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿ, 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಜೈಲುಪಾಲು ಆದಂತೆ ಆಗಿದೆ. ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡೋ ಸಾಧ್ಯತೆ ಇದೆ.

- Advertisement -

Latest News

error: Content is protected !!