Tuesday, July 14, 2026
Homeಚಿಕ್ಕಮಗಳೂರುಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

- Advertisement -
- Advertisement -

ಖಾತೆ ಬದಲಾವಣೆಗೆ ರೈತನಿಂದ 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿ

ಚಿಕ್ಕಮಗಳೂರು; ಖಾತೆ ಬದಲಾವಣೆಗೆ ರೈತನಿಂದ 30 ಸಾವಿರ ಲಂಚ ಪಡೆಯುವಾಗ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮೇ.13 ರಂದು ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ನಾಡಕಚೇರಿಯಲ್ಲಿ ನಡೆದಿದೆ. ರೆವೆನ್ಯೂ ಇನ್ಸ್ಪೆಕ್ಟರ್ ರಮೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ.

ಲಂಚ ನೀಡಲು ನಿರಾಕರಿಸಿದ್ದ ರೈತ ಲೋಕಾಯುಕ್ತರಿಗೆ ದೂರು ನೀಡಿದ್ದರು. ಅದರಂತೆ ಇಂದು ನಾಡಕಚೇರಿಗೆ ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ತಂಡ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಕಂದಾಯ ನಿರೀಕ್ಷಕ ರಮೇಶ್ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಸದ್ಯಕ್ಕೆ ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!