Saturday, August 29, 2026
Homeಕರಾವಳಿರಾಜ್ಯದಲ್ಲಿ ವ್ಯಾಪಕ ಮಳೆ ಹಿನ್ನೆಲೆ ; ದ.ಕ. ಉಡುಪಿ ಸೇರಿ 8 ಜಿಲ್ಲಾಡಳಿತಗಳ ಜೊತೆ ಕಂದಾಯ...

ರಾಜ್ಯದಲ್ಲಿ ವ್ಯಾಪಕ ಮಳೆ ಹಿನ್ನೆಲೆ ; ದ.ಕ. ಉಡುಪಿ ಸೇರಿ 8 ಜಿಲ್ಲಾಡಳಿತಗಳ ಜೊತೆ ಕಂದಾಯ ಸಚಿವ ಅಶೋಕ್ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ಮಳೆಯಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ
ರೆಡ್ ಅಲರ್ಟ್ ಇರುವ ಜಿಲ್ಲಾಡಳಿತಗಳ ಜೊತೆ ಕಂದಾಯ ಸಚಿವ ಆರ್. ಅಶೋಕ್ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಡಿಸಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ವೀಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಅಗತ್ಯ ಕ್ರಮ ಮತ್ತು ತೆಗೆದುಕೊಂಡ ಪೂರ್ವ ಸಿದ್ದತೆಗಳ ಕುರಿತು ಸಚಿವ ಅಶೋಕ್ ಪರಿಶೀಲನೆ ನಡೆಸಿದ್ದಾರೆ

ಇನ್ನು 3-4 ತಿಂಗಳು ಕಾರ್ಯಾಚರಣೆ ವೇಗ ಹೆಚ್ಚಿಸಬೇಕು, ಎಲ್ಲೇ ಭೂಕುಸಿತ, ನೆರೆ ಬಂದರೂ ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ ಪರಿಹಾರವನ್ನು ತ್ವರಿತವಾಗಿ ನೀಡಬೇಕು,‌ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು ಎಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ಅಶೋಕ್ ಸೂಚಿಸಿದ್ದಾರೆ. ‌

ಅಲ್ಲದೇ ಜಿಲ್ಲೆಗಳಲ್ಲಿ ಕಂಟ್ರೋಲ್‌ ರೂಮ್ ಸದಾ ಆಕ್ಟೀವ್ ಆಗಿರಬೇಕು ಮತ್ತು ಕಾಳಜಿ ಕೇಂದ್ರದಲ್ಲಿ ಕಂದಾಯ ಇಲಾಖೆ ಸೂಚಿಸಿದ ಪ್ರಕಾರವೇ ಊಟೋಪಚಾರ ವ್ಯವಸ್ಥೆ ಮಾಡಬೇಕು ಎಂದು ಸಚಿವರು ಸೂಚಿಸಿದ್ದಾರೆ.

- Advertisement -

Latest News

error: Content is protected !!