Saturday, June 6, 2026
Homeಕರಾವಳಿಅಂಬ್ಲಮೊಗರು: ಗ್ರಾಮ ಸಹಾಯಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ!

ಅಂಬ್ಲಮೊಗರು: ಗ್ರಾಮ ಸಹಾಯಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ!

- Advertisement -
- Advertisement -

ಕೊಣಾಜೆ : ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಹಾಯಕರಾಗಿ (ಉಗ್ರಾಣಿ) ಕಾರ್ಯನಿರ್ವಹಿಸುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಅಂಬ್ಲ ಮೊಗರುವಿನ ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ (34) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಕಳೆದ ಹಲವು ವರ್ಷಗಳಿಂದ ಗ್ರಾಮಕರಣಿಕರ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಇವರು, ಮೂರು ವರ್ಷದ ಹಿಂದಷ್ಟೆ ಮದುವೆಯಾಗಿದ್ದರು. ಇಂದು ಬೆಳಗ್ಗೆ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಕುತ್ತಾರಿನವರೆಗೆ ಕೆಲಸಕ್ಕೆ ಬಿಟ್ಟು ಬಂದಿದ್ದು,ಬಳಿಕ ಮನೆಗೆ ಮರಳಿದ ನಿತಿನ್ ರೂಮಿನೊಳಗೆ ಹೋಗಿದ್ದಾರೆ.ಎಷ್ಟೋತ್ತಾದರು ಮಗ ಹೊರಗೆ ಬರದೇ ಇದ್ದುದ್ದನ್ನು ಕಂಡು ಅನುಮಾನಗೊಂಡ ಅವರ ತಾಯಿ ರೂಮಿನೊಳಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಕೊಣಾಜೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

- Advertisement -

Latest News

error: Content is protected !!