ಬೆಂಗಳೂರು: ರಾಜ್ಯದಲ್ಲಿ ಅನ್‌ಲಾಕ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಅನ್‌ಲಾಕ್ ಮಾಡುವ ಬಗ್ಗೆ ಸಚಿವರು, ಅಧಿಕಾರಿಗಳ ಜೊತೆ ನಾಳೆ ಸಿಎಂ ಸಭೆ ನಡೆಸಲಿದ್ದಾರೆ. ಒಂದೇ ಸಲ ರಾಜ್ಯ ಅನ್‌ಲಾಕ್ ಆಗುವುದಿಲ್ಲ. ಅಂತರ್ ರಾಜ್ಯ ಓಡಾಟ ಸದ್ಯಕ್ಕಿರುವುದಿಲ್ಲ. ನಾಲ್ಕರಿಂದ ಐದನೇ ಹಂತಗಳಲ್ಲಿ ಅನ್‌ಲಾಕ್ ಆಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಮೊದಲನೆಯದಾಗಿ ಅಗತ್ಯ ವಸ್ತುಗಳ ಖರೀದಿಗೆ ನಿಗದಿಪಡಿಸಿದ ಸಮಯವನ್ನು 12 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ. ವ್ಯಾಯಾಮ ಮತ್ತು ವಾಯುವಿಹಾರಕ್ಕಾಗಿ ಉದ್ಯಾನಗಳಿಗೆ ಭೇಟಿ ನೀಡಲು ಅವಕಾಶ ನೀಡುವ ಬಗ್ಗೆ ಕೂಡ ಸರ್ಕಾರದ ಮಟ್ಟದಲ್ಲಿ ಚಿಂತನೆಗಳು ನಡೆಯುತ್ತಿವೆ. ಹಂತ ಹಂತವಾಗಿ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತದೆ. ಒಮ್ಮೆಲೆಯೇ ತೆರವುಗೊಳಿಸಿದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುವ ಅಪಾಯ ಇರಲಿದೆ ಎಂದರು.
ಜನಜೀವನವು ಸಾಮಾನ್ಯ ಸ್ಥಿತಿಗೆ ಬರಬೇಕಾದರೇ ಪ್ರಕರಣಗಳ ಸಂಖ್ಯೆ 500ಕ್ಕೆ ಇಳಿಕೆಯಾಗಬೇಕು. ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸಿದ ಬಳಿಕ ಸೋಂಕು ದೃಢ ಪ್ರಮಾಣವನ್ನು ವಿಶ್ಲೇಷಿಸಿ, ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ವಿವರಿಸಿದರು.