Tuesday, July 7, 2026
Homeಪ್ರಮುಖ-ಸುದ್ದಿರಾಜ್ಯದಲ್ಲಿ ಬರ ಪರಿಸ್ಥಿತಿ: ರೈತರ ಸಾಲ ಮನ್ನಾ ಕುರಿತು ಪರಿಶೀಲಿಸಿ ಸೂಕ್ತ ನಿರ್ಧಾರ; ಸಿಎಂ ಡಿ.ಕೆ....

ರಾಜ್ಯದಲ್ಲಿ ಬರ ಪರಿಸ್ಥಿತಿ: ರೈತರ ಸಾಲ ಮನ್ನಾ ಕುರಿತು ಪರಿಶೀಲಿಸಿ ಸೂಕ್ತ ನಿರ್ಧಾರ; ಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ ಮತ್ತು ಮಳೆ ಕೊರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರೈತರ ಸಾಲ ಮನ್ನಾ ಮಾಡುವ ಕುರಿತು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಕಲಬುರಗಿ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಬರ ನಿರ್ವಹಣೆ, ಕುಡಿಯುವ ನೀರು, ಮೇವು ಹಾಗೂ ರೈತರ ಸಮಸ್ಯೆಗಳ ಕುರಿತು ಪರಾಮರ್ಶೆ ನಡೆಸಲಾಗುವುದು ಮತ್ತು ಮುಂದಿನ ಎರಡು ಮೂರು ದಿನಗಳಲ್ಲಿ ಬೆಳಗಾವಿಗೂ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲಾಗುವುದು ಎಂದರು.

ಇದೇ ವೇಳೆ ರೈತರ ಸಾಲ ಮನ್ನಾ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಗಳು, ಯಾವ ಸಾಲ, ಯಾರ ಸಾಲ, ಯಾವ ರೀತಿಯ ಸಾಲ ಮತ್ತು ಎಷ್ಟು ಪ್ರಮಾಣದ ಸಾಲ ಎಂಬ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕವೇ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

- Advertisement -

Latest News

error: Content is protected !!