Saturday, June 6, 2026
Homeಕರಾವಳಿಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ‌ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ

ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ‌ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ಮಂಗಳೂರಿನಲ್ಲಿ ಇಂದು ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಪಾಲ್ಗೊಂಡಿದ್ದರು.ಕೆ.ಪಿ.ಟಿ ಜಂಕ್ಷನ್, ಪದವು ಜಂಕ್ಷನ್, ನಂತೂರು ಜಂಕ್ಷನ್ ಹಾಗು ವಿವಿಧ  ಹೆದ್ದಾರಿಗಳ ಕಾಮಗಾರಿಗಳ ಪ್ರಗತಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ,  ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರು, ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್, ಪೊಲೀಸ್ ಇಲಾಖೆ, ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!