Thursday, June 4, 2026
Homeತಾಜಾ ಸುದ್ದಿಶಿರಾಡಿ ಘಾಟಿಯಲ್ಲಿ ಸುಟ್ಟು ಕರಕಲಾದ ಅಕ್ಕಿ ಸಾಗಿಸುತ್ತಿದ್ದ ಲಾರಿ

ಶಿರಾಡಿ ಘಾಟಿಯಲ್ಲಿ ಸುಟ್ಟು ಕರಕಲಾದ ಅಕ್ಕಿ ಸಾಗಿಸುತ್ತಿದ್ದ ಲಾರಿ

- Advertisement -
- Advertisement -

ಶಿರಾಡಿ; ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಶಿರಾಡಿ ಘಾಟ್‌ನಲ್ಲಿ ನಡೆದಿದೆ.

ಹಾಸನ ಕಡೆಯಿಂದ ಬರುತ್ತಿದ್ದ  ಡಬಲ್ ಟರ್ನ್ ನಲ್ಲಿ ಟ್ರಕ್‌ನಲ್ಲಿ  ಶಿರಾಡಿ ಘಾಟ್ ಗೆ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ,ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ.

ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ . ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ ಉಂಟಾಗಿತ್ತು ಎನ್ನಲಾಗಿದೆ.

- Advertisement -

Latest News

error: Content is protected !!