Thursday, June 4, 2026
Homeಕರಾವಳಿಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ, ಚಾಲಕನ ಸ್ಥಿತಿ ಗಂಭೀರ

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ, ಚಾಲಕನ ಸ್ಥಿತಿ ಗಂಭೀರ

- Advertisement -
- Advertisement -

ಬೆಳ್ತಂಗಡಿ: ನಿನ್ನೆ ತಡರಾತ್ರಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಾಲ್ವರು ಗಾಯಗೊಂಡ ಘಟನೆ ಲಾಯಿಲದಲ್ಲಿ ನಡೆದಿದೆ.

ಲಾಯಿಲದ ಪುತ್ರಬೈಲು ಸಮೀಪ ರಿಕ್ಷಾ ಚಾಲಕ ಪ್ರಮೋದ್ ಭೈರ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಿಕ್ಷಾದಲ್ಲಿದ್ದ ಇತರರಾದ ರಾಮಣ್ಣ ಪುತ್ರಬೈಲು, ವಸಂತ ರಾಣಿ, ರಾಮಪ್ಪ ಗಾಂಧೀನಗರ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!