Friday, May 3, 2024
Homeಕರಾವಳಿಮಂಗಳೂರು; ಅಧಿಕಾರ ಸ್ವೀಕರಿಸುತ್ತಲೇ ಮರಳು ಮಾಫಿಯಾ ವಿರುದ್ಧ ಸಮರ ಸಾರಿದ ನೂತನ ಕಮೀಷನರ್; ನಾಲ್ಕು ಕಡೆಗಳಲ್ಲಿ...

ಮಂಗಳೂರು; ಅಧಿಕಾರ ಸ್ವೀಕರಿಸುತ್ತಲೇ ಮರಳು ಮಾಫಿಯಾ ವಿರುದ್ಧ ಸಮರ ಸಾರಿದ ನೂತನ ಕಮೀಷನರ್; ನಾಲ್ಕು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ಮೇಲೆ ದಾಳಿ

spot_img
- Advertisement -
- Advertisement -

ಮಂಗಳೂರು: ಅಧಿಕಾರ ಸ್ವೀಕರಿಸುತ್ತಲೇ  ನೂತನ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅಕ್ರಮ ಮರಳು ಮಾಫಿಯಾ ವಿರುದ್ಧ ಸಮರ ಸಾರಿದ್ದಾರೆ. ನಾಲ್ಕು ಕಡೆಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ.ಉಳ್ಳಾಲ, ಕಂಕನಾಡಿ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಕ್ರಮ ಮರಳು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಫೆಬ್ರವರಿ 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ

ಎಂಆರ್‌ಪಿಎಲ್ ಮೇಲ್ಸೇತುವೆ ಬಳಿ ಸುಮಾರು 10 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಫೆಬ್ರವರಿ 26ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ರಸ್ತೆಯಲ್ಲಿ ಸುಮಾರು 12-15 ಟನ್ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 28ರಂದು ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಆಡಂಕುದ್ರು ಎಂಬಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಸುಮಾರು ಎರಡು ಯುನಿಟ್‌ನಷ್ಟು ಮರಳು ಹಾಗೂ ಖಾಲಿ ಟಿಪ್ಪರ್‍ ಲಾರಿಯನ್ನು ಕಂಕನಾಡಿ ಠಾಣೆಯ ಠಾಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಾರ್ಚ್ 1ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಹಾಗೂ ಸಿಬಂದಿ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿರುವ ಸುಮಾರು 10 ಲೋಡ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ನಾಲ್ಕೂ ಪ್ರಕರಣಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!