Saturday, May 18, 2024
Homeಕರಾವಳಿಬೆಳ್ತಂಗಡಿ :ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸ್ ತಂಡದಿಂದ ಏಕಕಾಲದಲ್ಲಿ ದಾಳಿ: 5 ವಾಹನದಲ್ಲಿ ಬಂದ...

ಬೆಳ್ತಂಗಡಿ :ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸ್ ತಂಡದಿಂದ ಏಕಕಾಲದಲ್ಲಿ ದಾಳಿ: 5 ವಾಹನದಲ್ಲಿ ಬಂದ 20 ಕ್ಕೂ ಅಧಿಕ ಪೊಲೀಸ್ ತಂಡಕ್ಕೆ ಸಿಕ್ಕಿರೊದಾದರೂ ಏನೂ..?

spot_img
- Advertisement -
- Advertisement -

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯ ಸೂಚನೆಯಂತೆ ವಿಶೇಷ ಪೊಲೀಸ್ ತಂಡ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ದಾಳಿ ಮಾಡಿದ್ದಾರೆ. ಆದ್ರೆ ಪೊಲೀಸರಿಗೆ ಯಾವುದೇ ಅಂತಹ ಪ್ರಕರಣ ಕಂಡುಬಾರದ ಹಿನ್ನಲೆಯಲ್ಲಿ ಪೊಲೀಸರು ವಾಪಸ್ ಹೋಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಪೇಟೆಯ ಸುತ್ತಮುತ್ತಲಿನ ಲಾಡ್ಜ್ ಗಳಲ್ಲಿ ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗಳಾದ  ಅಮಟೆ ವಿಕ್ರಮ್ ಅವರ ಮಾರ್ಗದರ್ಶನಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ರವರ ನೇತೃತ್ವದಲ್ಲಿ ಬಂಟ್ವಾಳ ಉಪವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಐದು(5) ವಿಶೇಷ ತಂಡವನ್ನು ರಚಿಸಿ ಫೇ.6 ರಂದು ರಾತ್ರಿ ಸುಮಾರು ಹತ್ತು(10) ಗಂಟೆಗೆ ಐದು(5) ಪೊಲೀಸ್ ವಾಹನದಲ್ಲಿ ಇಪ್ಪತ್ತು(20) ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ತಂಡ ಏಕಕಾಲದಲ್ಲಿ ಉಜಿರೆಯ ಎಲ್ಲಾ ಲಾಡ್ಜ್ ಗಳ ಪ್ರತಿ ರೂಂಗಳ ಮೇಲೆ ದಾಳಿ ಮಾಡಿದ್ದಾರೆ. ನಂತರ ರಿಜಿಸ್ಟರ್ ಬುಕ್ , ಆಧಾರ್ ಕಾರ್ಡ್ ಹಾಗೂ ಇತರ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ. ಆದ್ರೆ ಪೊಲೀಸ್ ದಾಳಿ ವೇಳೆ ಯಾವ ಲಾಡ್ಜ್ ನಲ್ಲಿ ಕೂಡ ಅನೈತಿಕ& ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಿರುದಿಲ್ಲ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾಡ್ಜ್ ಗಳಿಗೆ ಬಂದು ತಂಗುವ ಪ್ರವಾಸಿಗರ ಮತ್ತು ಭಕ್ತರ ಪೂರ್ಣ ಮಾಹಿತಿ ಹಾಗೂ ದಾಖಲೆಗಳನ್ನು ಪಡೆದುಕೊಂಡ ಬಳಿಕ ರೂಂ ನೀಡಬೇಕು ಮತ್ತು ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಪೊಲೀಸರು ಲಾಡ್ಜ್ ಮಾಲೀಕರಿಗೆ ಸೂಕ್ತ ಎಚ್ಚರಿಕೆ ನೀಡಿ ತೆರಳಿದ್ದಾರೆ.

- Advertisement -
spot_img

Latest News

error: Content is protected !!