Sunday, June 21, 2026
Homeಚಿಕ್ಕಮಗಳೂರುಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸವಾರ ಸಾವು

ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸವಾರ ಸಾವು

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದಲ್ಲಿ ಶನಿವಾರ ಸಂಜೆ ಬೈಕಿನಲ್ಲಿ ಸಂಚರಿಸುತ್ತಿದ್ದ ಸವಾರನ ಮೇಲೆ ಆಕಸ್ಮಿಕವಾಗಿ ಮರದ ಕೊಂಬೆಯೊಂದು ಮುರಿದು ಬಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಹೊಸಮಠದ ಕೃಷ್ಣಗೌಡ ಅವರ ಪುತ್ರ ರಘು (38) ಎಂದು ಗುರುತಿಸಲಾಗಿದೆ.

ರಘು ಅವರು ಬಾಳಗಲ್ ಸಮೀಪದ ಕಟ್ಟುನೀರು ಹಳ್ಳದ ಬಳಿ ತಮ್ಮ ಬೈಕಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮರದ ದೊಡ್ಡ ರೆಂಬೆಯೊಂದು ನೇರವಾಗಿ ಅವರ ತಲೆಯ ಮೇಲೆ ಬಿದ್ದಿದೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!