- Advertisement -
- Advertisement -
ಚಾರ್ಮಾಡಿ : ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.


ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತ ದುರ್ದೈವಿ. ಬೆಳಗ್ಗಿನ ಜಾವ ನಾಲಕ್ಕು ಘಂಟೆಗೆ ಈ ದುರ್ಘಟನೆ ನಡೆದಿದ್ದು, ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರಿ ಗಾತ್ರದ ಮರವೊಂದು ಬೈಕ್ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ನವೀನ್ ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -