Wednesday, June 3, 2026
Homeಕರಾವಳಿಮಂಗಳೂರುಮನ್ ಕೀ ಬಾತ್ ನಲ್ಲಿ ಮಂಗಳೂರಿನ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ

ಮನ್ ಕೀ ಬಾತ್ ನಲ್ಲಿ ಮಂಗಳೂರಿನ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮದ 124ನೇ ಆವೃತ್ತಿ ಇಂದು ನಡೆಯಿತು.ಈ ಬಾರಿಯ ಮನ್ ಕೀ ಬಾತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರು ನಗರದ ತ್ಯಾಜ್ಯ ನಿರ್ವಹಣಾ ಪ್ರಯತ್ನಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಮಂಗಳೂರಿನಲ್ಲಿ ತಂತ್ರಜ್ಞಾನದ ಮೂಲಕ ತ್ಯಾಜ್ಯ ನಿರ್ವಹಣೆ ಕೆಲಸ ನಡೆಯುತ್ತಿದೆ ಎಂದು ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.ಇದು ಮಂಗಳೂರಿನ ಪಾಲಿಗೆ ಹೆಮ್ಮೆಯ ಕ್ಷಣ ಎಂದು ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಂತಸ ಹಂಚಿಕೊಂಡಿದ್ದಾರೆ.

ಮಾನ್ಯ ಪ್ರಧಾನಿಗಳು ನಮ್ಮ ನಗರದ ಸಾವಯವ ತ್ಯಾಜ್ಯ ನಿರ್ವಹಣಾ ಪ್ರಯತ್ನಗಳ ಬಗ್ಗೆ ಪ್ರಸ್ತಾಪಿಸಿದ್ದು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ. ಇದು ಸ್ವಚ್ಛ ಭಾರತದ ಬಗೆಗೆ ಎಲ್ಲರಲ್ಲೂ ಜಾಗೃತಿ ಮೂಡಿಸುವ ಕ್ರಮವಾಗಿದ್ದು ಸ್ವಚ್ಛತೆಯ ಬಗ್ಗೆ ಕಾರ್ಯನಿರ್ವಹಿಸುವವರಿಗೆ ಇನ್ನಷ್ಟು ಸ್ಪೂರ್ತಿ ನೀಡಲಿದೆ ಎಂದು ಶಾಸಕ ಕಾಮತ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!