Tuesday, June 9, 2026
Homeಕರಾವಳಿಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕೋವಿಡ್ ಪಾಸಿಟಿವ್ ಪ್ರಕರಣದಲ್ಲಿ ಏರಿಕೆ ; ಮಾರ್ಗಸೂಚಿ ಪಾಲಿಸದ ಕಾಲೇಜುಗಳಿಗೆ ನೋಟೀಸ್...

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕೋವಿಡ್ ಪಾಸಿಟಿವ್ ಪ್ರಕರಣದಲ್ಲಿ ಏರಿಕೆ ; ಮಾರ್ಗಸೂಚಿ ಪಾಲಿಸದ ಕಾಲೇಜುಗಳಿಗೆ ನೋಟೀಸ್ !

- Advertisement -
- Advertisement -

ಮಂಗಳೂರು:ದಿನದಿಂದ ದಿನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಏರುತ್ತಿರುವ ಹಿನ್ನಲೆಯಲ್ಲಿ,ಇದೀಗ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳನ್ನು ಪತ್ತೆಹಚ್ಚಿ ನೋಟಿಸ್ ನೀಡಲು ಮುಂದಾಗಿದೆ.

ಜಿಲ್ಲೆಯಲ್ಲಿ ಕಾಲೇಜುಗಳು ಆರಂಭಗೊಂಡ ಬಳಿಕ ಆರೋಗ್ಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದೆ. ಈ ವೇಳೆ 29 ಕಾಲೇಜುಗಳ 627 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇವರಲ್ಲಿ 326ರಷ್ಟು ವಿದ್ಯಾರ್ಥಿಗಳು ಕೇರಳದವರಾಗಿದ್ದರೆ, ಉಳಿದ ವಿದ್ಯಾರ್ಥಿಗಳು ಮಹಾರಾಷ್ಟ್ರ, ಉತ್ತರ ಭಾರತ ಹಾಗೂ ದ.ಕ. ಮೂಲದವರಾಗಿದ್ದಾರೆ.ಜಿಲ್ಲೆಯ ಕಾಲೇಜುಗಳಲ್ಲಿ ಹಾಸ್ಟೆಲ್ ಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ನೀಡಿದ್ದು ಇದೀಗ ಪಾಲನೆ ಮಾಡದ ಕಾಲೇಜುಗಳಿಗೆ ಎಚ್ಚರಿಕೆ ನೀಡಿ ನೋಟಿಸ್ ನೀಡಲು ನಿರ್ಧರಿಸಿದೆ.



ಸುಳ್ಯದ ಖಾಸಗಿ ಕಾಲೇಜೊಂದರಲ್ಲಿ ಕಳೆದ ಮೂರು ವಾರಗಳಲ್ಲಿ 77 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಾಧಿಸಿದೆ. ಕೇರಳ ಸೇರಿದಂತೆ ಹೊರ ರಾಜ್ಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಲ್ಲಿ ಕೊರೋನಾ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು ಅವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕವನ್ನು ತಪಾಸಣೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಕಾಲೇಜುಗಳಿದ್ದು ಹೊರಜಿಲ್ಲೆಯ ರಾಜ್ಯಗಳಿಂದ ಹೆಚ್ಚಿನ ಮಂದಿ ವಿದ್ಯಾರ್ಜನೆಗೆ ಆಗಮಿಸುತ್ತಾರೆ. ಹೀಗೆ ಬರುವಾಗ 72 ಗಂಟೆಗಳ ಆರ್ ಟಿ ಪಿಸಿಆರ್ ನೆಗೆಟಿವ್ ವರದಿ ತರುತ್ತಿದ್ದರೂ ಕೂಡಾ ಇಲ್ಲಿ ಕ್ವಾರಂಟೈನ್ ಆದ ಬಳಿಕ ಅವರಲ್ಲಿ ಕೊವೀಡ್ ಕಾಣಿಸಿಕೊಳ್ಳುತ್ತಿದೆ.

- Advertisement -

Latest News

error: Content is protected !!