- Advertisement -


- Advertisement -
ತೆಲುಗಿನ ಜನಪ್ರಿಯ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ನಿಂದ ನಟ-ನಿರ್ದೇಶಕ ರಿಷಬ್ ಶೆಟ್ಟಿ ನಟನೆಯ ‘ಪ್ರೊಡಕ್ಷನ್ ನಂಬರ್ 36’ ಹೆಸರಿನ ಬಿಗ್ ಬಜೆಟ್ ಸಿನಿಮಾ ಘೋಷಣೆಯಾಗಿದೆ.
ಐತಿಹಾಸಿಕ ಆಕ್ಷನ್ ಡ್ರಾಮಾ ಹಿನ್ನೆಲೆಯ ಈ ಸಿನಿಮಾದ ಘೋಷಣಾ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ.
ಸಿನಿಮಾ ಕತೆಯು 18ನೇ ಶತಮಾನದಾಗಿದ್ದು, ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ನಿರ್ದೇಶಕ ಅಶ್ವಿನ್ ಗಂಗರಾಜು ಮೇಲಿದೆ.
ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಒಂದೇ ಸಮಯದಲ್ಲಿ ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ. ಇನ್ನುಳಿದಂತೆ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.
- Advertisement -


