Monday, June 8, 2026
Homeತಾಜಾ ಸುದ್ದಿಇಂಗ್ಲೆಂಡ್ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ಸ್ವೀಕಾರ

ಇಂಗ್ಲೆಂಡ್ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ಸ್ವೀಕಾರ

- Advertisement -
- Advertisement -

ಲಂಡನ್:‌ ರಿಷಿ ಸುನಕ್ ಅವರು ಬಕಿಂಗ್ಹ್ಯಾಮ್ ಅರಮನೆಯಲ್ಲಿ ಕಿಂಗ್ ಚಾರ್ಲ್ಸ್ ಅವರನ್ನು ಭೇಟಿಯಾಗಿ, ಬಳಿಕ ಬ್ರಿಟನ್ ಪ್ರಧಾನಿಯಾಗಿ ಔಪಚಾರಿಕವಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ರಿಷಿ ಸುನಕ್ ಬ್ರಿಟನ್ ಮೊದಲ ಭಾರತೀಯ ಮೂಲದ ಪ್ರಧಾನಿ ಪಟ್ಟಕ್ಕೇರಿದ್ದಾರೆ.

ತಮ್ಮ ಮೊದಲ ಭಾಷಣದಲ್ಲಿ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕಿದೆ ಎಂದು ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ. ದೇಶವು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಈ ಕ್ಷಣದಿಂದಲೇ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!