Thursday, June 4, 2026
Homeಕರಾವಳಿಪುತ್ತೂರು: ರಸ್ತೆ ದಾಟುತ್ತಿದ್ದ ನಿವೃತ್ತಿ ಶಿಕ್ಷಕನಿಗೆ ರಿಕ್ಷಾ ಡಿಕ್ಕಿಯಾಗಿ ಸಾವು

ಪುತ್ತೂರು: ರಸ್ತೆ ದಾಟುತ್ತಿದ್ದ ನಿವೃತ್ತಿ ಶಿಕ್ಷಕನಿಗೆ ರಿಕ್ಷಾ ಡಿಕ್ಕಿಯಾಗಿ ಸಾವು

- Advertisement -
- Advertisement -

ಪುತ್ತೂರು: ರಸ್ತೆ ದಾಟುತ್ತಿದ್ದ ನಿವೃತ್ತಿ ಶಿಕ್ಷಕನಿಗೆ ರಿಕ್ಷಾ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಮೃತ ದುರ್ದೈವಿ.

ಸೂರ್ಯನಾರಾಯಣ ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರಗೆ ಗರ್ಭಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದು ಕೊಂಡು ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಮತ್ತೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಸ್ಟ್ ನ್ಯೂರೊ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!