Thursday, June 4, 2026
Homeತಾಜಾ ಸುದ್ದಿಶಿವಮೊಗ್ಗದ ದುರಂತದ ಬೆನ್ನಲ್ಲೇ ಮತ್ತೊಂದು ಅವಘಡ: ಭೀಕರ ಅಪಘಾತಕ್ಕೆ 9 ಮಂದಿ ಬಲಿ

ಶಿವಮೊಗ್ಗದ ದುರಂತದ ಬೆನ್ನಲ್ಲೇ ಮತ್ತೊಂದು ಅವಘಡ: ಭೀಕರ ಅಪಘಾತಕ್ಕೆ 9 ಮಂದಿ ಬಲಿ

- Advertisement -
- Advertisement -

ಹೈದರಾಬಾದ್ : ಆಟೋ ಹಾಗೂ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಕಾರ್ಮಿಕರು ಸಾವನ್ನಪ್ಪಿದ ಘಟನೆ ತೆಲಂಗಾಣದ ನಲಗೊಂಡದ ಅಂಗಡಿಪೇಟ ಬಳಿ ನಡೆದಿದೆ .

ನಲಗೊಂಡದ ಅಂಗಡಿಪೇಟ ಬಳಿ ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೇ 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನಡೆಸಿ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!