Thursday, June 4, 2026
Homeಕರಾವಳಿಬೆಳ್ತಂಗಡಿ: ಬೈಕ್-ಲಾರಿ ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್-ಲಾರಿ ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ತೆಂಕಕಾರಂದುರು ಗ್ರಾಮದ ಆರ್ಬಿ ಎಂಬಲ್ಲಿ ನಾರಾವಿ-ಗುರುವಾಯನಕೆರೆ ರಸ್ತೆಯಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಲಾರಿಯ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಸ್ಕೂಟರ್ ಸವಾರನನ್ನು ಗರ್ಡಾಡಿಯ ರನ್ನಡಿ ಪಳಿಕೆಯ ಗಿರೀಶ್ ಮೂಲ್ಯ (22 ವ) ಎಂದು ಗುರುತಿಸಲಾಗಿದೆ. ಲಾರಿ ಚಾಲಕನ ವೇಗದ ಚಾಲನೆ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ/

ಅಪಘಾತದ ಕುರಿತು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ. ವೇಣೂರು ಪಿಎಸ್ಐ ಲೋಲಕ್ಷ ಭೇಟಿ ನೀಡಿದರು.

- Advertisement -

Latest News

error: Content is protected !!