Saturday, June 13, 2026
Homeಇತರಕಾರ್, ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಕಾರ್, ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

- Advertisement -
- Advertisement -

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಹೊಸಹಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಕಾರ್ ನಲ್ಲಿದ್ದ ಚಾಲಕ ದೇವರಾಜ್, ಭೀಮರಾಯ ಮತ್ತು ಅಂಜಲಿದೇವಿ ಮೃತಪಟ್ಟಿದ್ದಾರೆ. ಮೃತರು ಮುದ್ದೇಬಿಹಾಳ ತಾಲೂಕಿನವರು ಎಂದು ಹೇಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ 50ರ ಫ್ಲೈಓವರ್ ಮೇಲೆ ನೀರು ನಿಂತಿದ್ದು ನಿಯಂತ್ರಣ ತಪ್ಪಿದ ಕಾರ್ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿದೆ. ಖಾನಹೊಸಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

- Advertisement -

Latest News

error: Content is protected !!