Friday, April 26, 2024
Homeಕರಾವಳಿಬಂಟ್ವಾಳದಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವು...

ಬಂಟ್ವಾಳದಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವು…

spot_img
- Advertisement -
- Advertisement -

ಬಂಟ್ವಾಳ: ತಾಲೂಕಿನ ಮಾರ್ನಬೈಲು ಸಮೀಪ ಪೆಲತ್ತಕಟ್ಟೆ ಎಂಬಲ್ಲಿ ನಿನ್ನೆ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತರನ್ನು ಬೊಳ್ಳಾಯಿ ನಿವಾಸಿ ಇಮ್ರಾನ್(22) ಹಾಗೂ ಮುಬಶ್ಶಿರ್ (12) ಎಂದು ಗುರುತಿಸಲಾಗಿದೆ. ಮೂಲತಃ ಕಾಸರಗೋಡು ನಿವಾಸಿಯಾಗಿರುವ ಇಮ್ರಾನ್ ತನ್ನ ಸಂಬಂಧಿ ಹುಡುಗ ಮುಬಶ್ಶಿರ್ ಜೊತೆ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆ ಎಂಬಲ್ಲಿ ಎರಡು ಆಕ್ಟಿವಾ ವಾಹನಗಳ ನಡುವೆ ಸರಣ ಅಪಘಾತ ಸಂಭವಿಸಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಇವರನ್ನು ಮಂಗಳೂರಿನ ಆಸ್ಪತ್ರೆಗೆ    ದಾಖಲಿಸಲಾಗಿತ್ತಾದರೂ  ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಮೃತಪಟ್ಟಿದ್ದಾರೆ.

 ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!