- Advertisement -


- Advertisement -
ಬೆಳಗಾವಿ: ಟಾಟಾ ಏಸ್ ಹಾಗೂ ಬೊಲೆರೋ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ.

ಈ ದಾರುಣ ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಓರ್ವ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದವರೆಂದು ತಿಳಿದು ಬಂದಿದ್ದು, ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಹೋಗಿ ವಾಪಸ್ ಮರಳುವಾಗ ಈ ಘಟನೆ ನಡೆದಿದೆ.
ಸ್ಥಳಕ್ಕೆ ಎಎಸ್ ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸವದತ್ತಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


