- Advertisement -
- Advertisement -
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಸಮೀಪದ ಬುಡೋಳಿಯ ಜೋಗಿಬೆಟ್ಟು ಎಂಬಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಬುಡೋಳಿ ನಿವಾಸಿ ಇಬ್ರಾಹೀಂ ಎಂಬವರ ಪುತ್ರ ಮುಹಮ್ಮದ್ ಶರೀಫ್ (33) ಮೃತರು. ಇವರು ಬುಡೋಳಿಯಿಂದ ಗಡಿಯಾರ ಕಡೆಗೆ ತನ್ನ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -