Thursday, May 9, 2024
Homeತಾಜಾ ಸುದ್ದಿಖಾಸಗಿ ಬಸ್ ಗೆ ಬೈಕ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಖಾಸಗಿ ಬಸ್ ಗೆ ಬೈಕ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

ಲಿಂಗದಹಳ್ಳಿಯ ಅಮೃತ ಮಹಲ್​ ಸಮೀಪ ಈ ದುರ್ಘಟನೆ ನಡೆದಿದ್ದು, ಕಿರಣ್(26), ನಾಗರಾಜ ನಾಯ್ಕ್(30) ಮೃತ ಬೈಕ್​ ಸವಾರರಾಗಿದ್ದಾರೆ.

ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ಬಸ್ಸಿಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದ್ದು, ಬಸ್ಸು ಚಾಲಕ ಅಪಘಾತವನ್ನು ತಪ್ಪಿಸುವ ಭರದಲ್ಲಿ ತೀರಾ ಎಡ ಬದಿಗೆ ಬಂದಿದ್ದು ಆದರೂ ಬೈಕ್ ಸವಾರರನ್ನು ತಪ್ಪಿಸಲು ಸಾಧ್ಯವಾಗಲಿಲ್ಲ ಪರಿಣಾಮ ಬಸ್ಸು ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -
spot_img

Latest News

error: Content is protected !!