Friday, June 5, 2026
Homeತಾಜಾ ಸುದ್ದಿಪಿಕಪ್ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ : ಪಿಕಪ್ ಡಿಕ್ಕಿಯಾದ ರಭಸಕ್ಕೆ ಓಮ್ನಿಯಲ್ಲಿದ್ದ ಇಬ್ಬರು...

ಪಿಕಪ್ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ : ಪಿಕಪ್ ಡಿಕ್ಕಿಯಾದ ರಭಸಕ್ಕೆ ಓಮ್ನಿಯಲ್ಲಿದ್ದ ಇಬ್ಬರು ಸಾವು

- Advertisement -
- Advertisement -

ಕೊಡಗು: ಪಿಕಪ್ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಪಿಕಪ್ ಬಂದು ಗುದ್ದಿದ ರಭಸಕ್ಕೆ ಓಮ್ನಿ ನಜ್ಜುಗುಜ್ಜಾಗಿದೆ. ಓಮ್ನಿ ಚಾಲಕ ಹರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡ ಸುಬ್ರಮಣಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಸಾನ್ನಪ್ಪಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತರಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಮೃತಪಟ್ಟವರಿಬ್ಬರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದವರಾಗಿದ್ದಾರೆ. ಈ ಅಪಘಾತ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!