Thursday, June 4, 2026
Homeಕರಾವಳಿಉಡುಪಿಪಡುಬಿದ್ರಿ ರಸ್ತೆ ಅಪಘಾತ: ಜಾರ್ಖಂಡ್ ಮೂಲದ ವ್ಯಕ್ತಿ ಮೃತ್ಯು

ಪಡುಬಿದ್ರಿ ರಸ್ತೆ ಅಪಘಾತ: ಜಾರ್ಖಂಡ್ ಮೂಲದ ವ್ಯಕ್ತಿ ಮೃತ್ಯು

- Advertisement -
- Advertisement -

ಪಡುಬಿದ್ರಿ: ಹೆಜಮಾಡಿ ಗ್ರಾಮದ ಗುಂಡಿ ಎಂಬಲ್ಲಿ ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಮೃತರನ್ನು ಜಾರ್ಖಂಡ್ ಮೂಲದ ಸದಕತ್ತ್ ಅನ್ಸಾರಿ (30) ಎಂದು ಗುರುತಿಸಲಾಗಿದೆ.

ಗಾರೆ ಕೆಲಸ ಮಾಡಿಕೊಂಡು ಹೆಜಮಾಡಿಯ ಎಸ್ ಎಸ್ ರೋಡ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಪತ್ನಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಗುರುವಾರ ರಾತ್ರಿ ಸ್ಕೂಟರ್ ನಲ್ಲಿ ತೆರಳಿದ್ದರು. ಮನೆಯಿಂದ ಹೋದವರು ಗುಂಡಿ ಸಮೀಪದ ಮೋರಿಗೆ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಸಹೋದರ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!