Thursday, June 4, 2026
Homeಕರಾವಳಿಪುತ್ತೂರು: ಕೋವಿಡ್ ನಿಂದ ಮೃತರ ಮೃತದೇಹ ತರಲು ಹೋಗುತ್ತಿದ್ದ ಆಂಬುಲೆನ್ಸ್ ಗೆ ಅಪಘಾತ

ಪುತ್ತೂರು: ಕೋವಿಡ್ ನಿಂದ ಮೃತರ ಮೃತದೇಹ ತರಲು ಹೋಗುತ್ತಿದ್ದ ಆಂಬುಲೆನ್ಸ್ ಗೆ ಅಪಘಾತ

- Advertisement -
- Advertisement -

ಪುತ್ತೂರು: ಸುಳ್ಯ ಮೂಲದ ವ್ಯಕ್ತಿಯೊಬ್ಬರು ಕೋವಿಡ್ ನಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಅವರ ಮೃತದೇಹವನ್ನು ತರಲು ಸುಳ್ಯದ ಪ್ರಗತಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಹೋಗುತ್ತಿದ್ದ ಆಂಬುಲೆನ್ಸ್ ಮತ್ತು ವಿಟ್ಲದಿಂದ ಪುತ್ತೂರು ಕಡೆ ಬರುತ್ತಿದ್ದ ಇಕೋ ನಡುವೆ ಕಬಕ ಪೊಲೀಸ್ ಚೆಕ್ ಪಾಯಿಂಟ್ ಬಳಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಎರಡೂ ವಾಹನಕ್ಕೆ ಹಾನಿಯಾಗಿದ್ದು, ಇಕೋದಲ್ಲಿದ್ದ ಮಹಿಳೆ ಮತ್ತು ಆಂಬುಲೆನ್ಸ್ ನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!