Friday, April 26, 2024
Homeಕರಾವಳಿಕಡಬ: ಭೀಕರ ರಸ್ತೆ ಅಪಘಾತ- ಓರ್ವ ಮೃತ್ಯು, ನಾಲ್ವರು ಗಂಭೀರ

ಕಡಬ: ಭೀಕರ ರಸ್ತೆ ಅಪಘಾತ- ಓರ್ವ ಮೃತ್ಯು, ನಾಲ್ವರು ಗಂಭೀರ

spot_img
- Advertisement -
- Advertisement -

ಕಡಬ: ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ.

ರಿಟ್ಝ್ ಕಾರು ಉಪ್ಪಿನಂಗಡಿ ಕಡೆಯಿಂದ ಹೊಸ್ಮಠ ಕಡೆಗೆ ಬರುತ್ತಿದ್ದು, ಪದವು – ಬಲ್ಯ ನಡುವೆ ತಿರುವಿನಲ್ಲಿ ಢಿಕ್ಕಿ ನಡೆದಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬವರ ಪುತ್ರ ನವೀನ್ ಮಾರ್ಟಿಸ್(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮೃತರ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸಹೋದರಿ ಸುಶ್ಮಾ ಮಾರ್ಟಿಸ್ ಹಾಗೂ ಪತ್ನಿ ಲವಿಟಾ ಲೋಬೋ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಾನವೀಯತೆ ಮೆರೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ:
ಗಾಯಾಳುವನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಮಾನವೀಯತೆ ಮೆರೆದಿದ್ದಾರೆ. ಕಡಬದಲ್ಲಿ ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ಉಮೇಶ್ ಉಪ್ಪಳಿಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಮೂವರನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಳಿದ ಓರ್ವ ಮಹಿಳೆಯನ್ನು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆಯವರು ಪೊಲೀಸ್ ವಾಹನದಲ್ಲಿ ಉಪ್ಪಿನಂಗಡಿ ವರೆಗೆ ಕರೆದೊಯ್ದಿದ್ದು, ಆ ಬಳಿಕ ಉಪ್ಪಿನಂಗಡಿ ಠಾಣಾ ಉಪ ನಿರೀಕ್ಷಕರ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಚಿವರ ಕಾರ್ಯಕ್ರಮಕ್ಕೆ ತೆರಳುತ್ತಿರುವುದರ ನಡುವೆಯೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಕಡಬ ಠಾಣಾ ಎಸ್‌ಐ ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

- Advertisement -
spot_img

Latest News

error: Content is protected !!