Wednesday, May 15, 2024
Homeಕರಾವಳಿಬೆಳ್ತಂಗಡಿ: ಚಲಿಸುತ್ತಿದ್ದ ಪಿಕಪ್ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿ

ಬೆಳ್ತಂಗಡಿ: ಚಲಿಸುತ್ತಿದ್ದ ಪಿಕಪ್ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನಲ್ಲಿ ಸೋಮವಾರದಿಂದ ಸುರಿಯುತ್ತಿರುವ ಮಳೆಗೆ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ರಬ್ಬರ್ ನರ್ಸರಿ ಮುಂಭಾಗದಲ್ಲಿ ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಷನ್ ನಿಂದ ವೇಣೂರು ಸಬ್ ಸ್ಟೇಷನ್ ಗೆ ಹೋಗುವ 33 ಕೆ.ವಿ ವಿದ್ಯುತ್ ಕಂಬ ಇಂದು ಬೆಳಗ್ಗೆ ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಬಿದ್ದು ವಾಹನಕ್ಕೆ ಹಾನಿಯಾಗಿದ್ದು ವಾಹನದಲ್ಲಿದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಳಗ್ಗೆ ಸುಮಾರು 5 ಗಂಟೆಗೆ ವೇಣೂರು ಗೋಳಿಯಂಗಡಿಯಿಂದ ಗುರುವಾಯನಕೆರೆ ಕಡೆಗೆ ಪಿಕಪ್ ವಾಹನವನ್ನು ಲಿನ್ಸ್ .ಟಿ.ಡಿಯವರು ಚಾಲಯಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಸರಿಯಾಗಿ ಹಾಕದ ವಿದ್ಯುತ್ ಕಂಬ :
ವಿದ್ಯುತ್ ಕಂಬಗಳನ್ನು ಸರಿಯಾದ ರೀತಿಯಲ್ಲಿ ಅಂತರ ಕಾಯ್ದುಕೊಳ್ಳದೆ ಎಲ್ಲೆದರಲ್ಲಿ ಸಿಕ್ಕಸಿಕ್ಕ ಕಡೆಗಳಲ್ಲಿ ಹಾಕಿದ್ದು ಅಗಲೀಕರಣವಾಗವ ವೇಳೆ‌ ಅದನ್ನು ವರ್ಗಾಯಿಸಲು ಆದೇಶ ಮಾಡಿದ್ದರೂ ಕೂಡ ಅದನ್ನು ಮತ್ತೆ ಸರಿಯಾದ ಸ್ಥಳದಲ್ಲಿ ಹಾಕದೆ ಅಲ್ಲಿಯೇ ಬಿಟ್ಟಿದ್ದಾರೆ.

ಇದರಿಂದ ಕಂಬಗಳ‌ ಬುಡಗಳಿಗೆ ನೀರು ನಿಂತು ಕಂಬಗಳು ಬಿಳುತ್ತಿದೆ ಇದರ ಪಕ್ಕದಲ್ಲಿ ಡಿ.ಸಿ ಲೈನ್‌ ಕೂಡ ಹಾದುಹೋಗಿದ್ದು ಇನ್ನೂ ಹಲವು ಕಂಬಗಳು ಬಿಳುವ ಸ್ಥಿತಿಯಲ್ಲಿದ್ದು ಸ್ಥಳೀಯ ನಿವಾಸಿಗಳು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇನ್ನಾದರೂ ಅಧಿಕಾರಿಗಳು ಇದರ ಬಗ್ಗೆ ಎಚ್ಚೆತ್ತು ಕಂಬಗಳನ್ನು ಸರಿಯಾದ ಸ್ಥಳಗಳಲ್ಲಿ ಹಾಕಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳಿಯರು ಮನವಿ‌ ಮಾಡುತ್ತಿದ್ದಾರೆ.

- Advertisement -
spot_img

Latest News

error: Content is protected !!