Wednesday, June 24, 2026
Homeಕರಾವಳಿಮಂಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಟರ್ ಡಿಕ್ಕಿಯಾಗಿ ವ್ಯಕ್ತಿಗೆ ಗಂಭೀರ ಗಾಯ

ಮಂಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಟರ್ ಡಿಕ್ಕಿಯಾಗಿ ವ್ಯಕ್ತಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಇಂದು ಬೆಳಿಗ್ಗೆ ನಗರದ ಹೊರವಲಯದ ತಲಪಾಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.

 ತಲಪಾಡಿಯಲ್ಲಿ ಟಯರ್ ಅಂಗಡಿ ಇಟ್ಟುಕೊಂಡಿದ್ದ ತುಳಸಿ ಅವರು ಮನೆಯಿಂದ ಸ್ಕೂಟರಿನಲ್ಲಿ ಬರುತ್ತಿದ್ದ ಸಂದರ್ಭ, ಡಿವೈಡರ್ ಇರುವ ಪ್ರದೇಶದಲ್ಲಿ ತಿರುಗಿಸುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಮಾರ್ಗವಾಗಿ ಬರುತ್ತಿದ್ದ ಕರ್ನಾಟಕ ಸಾರಿಗೆ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ.

ಬಸ್-ಸ್ಕೂಟರ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ರಭಸಕ್ಕೆ ಸ್ಕೂಟರ್ ಬಸ್ಸಿನಡಿಗೆ ಬಿದ್ದು ನಜ್ಜುಗೊಜ್ಜಾಗಿದೆ. ಈ ಸಂಬಂಧ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

- Advertisement -

Latest News

error: Content is protected !!