Thursday, June 25, 2026
Homeಕರಾವಳಿನೆಲ್ಯಾಡಿಯಲ್ಲಿ ಭೀಕರ ರಸ್ತೆ ಅಪಘಾತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್-ಲಾರಿ!

ನೆಲ್ಯಾಡಿಯಲ್ಲಿ ಭೀಕರ ರಸ್ತೆ ಅಪಘಾತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್-ಲಾರಿ!

- Advertisement -
- Advertisement -

ಕಡಬ: ಮಂಗಳೂರಿನ ಕಡಬ ತಾಲೂಕಿನ ನೆಲ್ಯಾಡಿಯ ರಾಷ್ಟ್ರೀಯ ಹೆದ್ದಾರಿ 75 ರ ಮಣ್ಣಗುಂಡಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಕಂಟೈನರ್ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿಯ ಚಾಲಕ ಲಾರಿಯಿಂದ ಹೊರಬರಲಾರದೆ ಸಜೀವ ದಹನವಾಗಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಂಬಾ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಲಾರಿ-ಬಸ್ ಗಳು ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಬಸ್ ನ ಪ್ರಯಾಣಿಕರು ಬಸ್ ನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!