Thursday, June 4, 2026
Homeತಾಜಾ ಸುದ್ದಿಮಹಾರಾಷ್ಟ್ರ ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಐವರು ಸಾವು, ಹಲವರಿಗೆ ಗಂಭೀರ...

ಮಹಾರಾಷ್ಟ್ರ ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಐವರು ಸಾವು, ಹಲವರಿಗೆ ಗಂಭೀರ ಗಾಯ

- Advertisement -
- Advertisement -

ಮುಂಬೈ: ಹಲವು ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಐವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಮಹಾರಾಷ್ಟ್ರ ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇ ನ ಖಲಾಪುರ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ.

ಟ್ರಕ್ಕೊಂದು ಎರಡು ಕಾರುಗಳಿಗೆ ಮತ್ತು ಒಂದು ಗೂಡ್ಸ್ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದೆ. ಅಪಘಾತದ ರಭಸಕ್ಕೆ ವಾಹನಗಳು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ನವೀ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಜೊತೆ ಸೇವೆ ಸಲ್ಲಿಸುತ್ತಿದ್ದ ವೈದ್ಯ ವೈಭವ್ ಜಂಜಾರೆ ಮತ್ತು ಅವರ ಕುಟುಂಬಸ್ಥರು ಮೃತರಾಗಿದ್ದಾರೆ. ವೈಭವ್ ಅವರು ಪತ್ನಿ, ತಾಯಿ ಮತ್ತು ಮಗಳೊಂದಿಗೆ ಕಾರಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!