Friday, June 5, 2026
Homeಕರಾವಳಿಬೆಳ್ತಂಗಡಿ: ಪಿಕಪ್-ಬೈಕ್ ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಪಿಕಪ್-ಬೈಕ್ ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳ್ತಂಗಡಿ: ಮುಂಡಾಜೆಯ ಪಕ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ -ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಶೇಖರ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಎಂಬವರೇ ಮೃತಪಟ್ಟ ದುರ್ದೈವಿ.

ಬೈಕ್ ಬೆಳ್ತಂಗಡಿ ಕಡೆ ಬರುತ್ತಿದ್ದಾಗ ಪಿಕಪ್ ವಾಹನವನ್ನು ಓವರ್ ಟೆಕ್ ಮಾಡುವ ರಭಸಕ್ಕೆ ಮುಂಡಾಜೆ ಸೀಟ್ ಬಳಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಹಸವಾರನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!