- Advertisement -
- Advertisement -
ಪಡುಬಿದ್ರಿ: ಉಡುಪಿ ಜಿಲ್ಲೆಯ ಉಚ್ಚಿಲ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಉಡುಪಿ- ಮಂಗಳೂರು ರಸ್ತೆಬದಿ ಕೆಟ್ಟು ನಿಂತಿದ್ದ ಮೈದಾಹಿಟ್ಟು ಸಾಗಾಟದ ಲಾರಿಗೆ ಹಿಂದಿನಿಂದ ಬಂದ ಈರುಳ್ಳಿ ಸಾಗಾಟದ ಇನ್ನೊಂದು ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಈ ವೇಳೆ ಕೆಟ್ಟು ನಿಂತ ಲಾರಿಯನ್ನು ರಿಪೇರಿ ಮಾಡಲು ಪರಿಶೀಲಿಸುತ್ತಿದ್ದ ಅದರ ಚಾಲಕ ಹುಬ್ಬಳ್ಳಿಯ ಮಹಂತೇಶ್ ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಇನ್ನೊಂದು ಲಾರಿಯ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತದ ತೀವ್ರತೆಗೆ ಎರಡು ಲಾರಿಗಳು ಪಲ್ಟಿಯಾಗಿದ್ದು ಕೆಟ್ಟುನಿಂತ ಲಾರಿ ಡಿವೈಡರ್ ದಾಟಿ ಇನ್ನೊಂದು ಇನ್ನೊಂದು ಬದಿಯ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -