Friday, June 5, 2026
Homeಕರಾವಳಿಬಂಟ್ವಾಳ: ಬೈಕ್ ಗೆ ಲಾರಿ ಢಿಕ್ಕಿ; ಬ್ಯಾಂಕ್ ಉದ್ಯೋಗಿ ಸಾವು

ಬಂಟ್ವಾಳ: ಬೈಕ್ ಗೆ ಲಾರಿ ಢಿಕ್ಕಿ; ಬ್ಯಾಂಕ್ ಉದ್ಯೋಗಿ ಸಾವು

- Advertisement -
- Advertisement -

ಬಂಟ್ವಾಳ: ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಘಟನೆಯಲ್ಲಿ ಬೈಕ್ ಸವಾರ ಬ್ಯಾಂಕ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಪಾಣೆಮಂಗಳೂರು ಸಮೀಪ ಇಂದು ನಡೆದಿದೆ.

ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ್ ನಾಯ್ಕ್(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಗಣೇಶ್ ಮಂಗಳೂರಿನ ಬ್ಯಾಂಕೊಂದರಲ್ಲಿ ಉದ್ಯೋಗಿಯಾಗಿದ್ದು, ಮನೆಯಿಂದ ಕಚೇರಿಗೆ ಹೋಗುವ ವೇಳೆ ಘಟನೆ ನಡೆದಿದೆ.

ಅಪಘಾತದಲ್ಲಿ ಗಣೇಶ್ ತೀವ್ರ ವಾಗಿ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!