Thursday, June 4, 2026
Homeಕರಾವಳಿಮೈಸೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳ ಮೂಲದ ಇಬ್ಬರಿಗೆ ಗಾಯ

ಮೈಸೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳ ಮೂಲದ ಇಬ್ಬರಿಗೆ ಗಾಯ

- Advertisement -
- Advertisement -

ಪಿರಿಯಾಪಟ್ಟಣ: ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಬ್ಬರು ಯುವಕರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವವರನ್ನು ಕೆಳಗಿನಪೇಟೆಯ ನಿವಾಸಿ ಶಂಸುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂದು ಗುರುತಿಸಲಾಗಿದೆ. ಗಾಯಳುಗಳು ತೆರಳುತ್ತಿದ್ದ ಇನ್ನೋವ ಕಾರಿಗೆ ಸರಕಾರಿ ಬಸ್ಸು ಢಿಕ್ಕಿ ಹೊಡೆದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ ಇಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!