Saturday, June 6, 2026
Homeಕರಾವಳಿಮಂಗಳೂರು: ಮರಕ್ಕೆ ಢಿಕ್ಕಿ ಹೊಡೆದ ಪಿಕ್‌ಅಪ್, ಉಪ್ಪಿನಂಗಡಿಯ ಇಬ್ಬರು ಯುವಕರು ಮೃತ್ಯು

ಮಂಗಳೂರು: ಮರಕ್ಕೆ ಢಿಕ್ಕಿ ಹೊಡೆದ ಪಿಕ್‌ಅಪ್, ಉಪ್ಪಿನಂಗಡಿಯ ಇಬ್ಬರು ಯುವಕರು ಮೃತ್ಯು

- Advertisement -
- Advertisement -

ಬಂಟ್ವಾಳ: ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ವಾಹನ ಮರಕ್ಕೆ ಢಿಕ್ಕಿ ಹೊಡೆದು, ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ನಡೆದಿದೆ.

ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಇವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ ಮೃತಪಟ್ಟಿದ್ದಾರೆ.

ಗಂಭೀರ ಗಾಯಗೊಂಡ ಸಿಂಚನ್ ಹಾಗೂ ಸುದೀಪ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಪಿಕ್ ಅಪ್ ನ ಹಿಂಬದಿಯಲ್ಲಿದ್ದರು ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!