Friday, June 5, 2026
Homeಕರಾವಳಿಸುಳ್ಯದ ಪರಿವಾರಕಾನದಲ್ಲಿ ವಾಹನ ಡಿಕ್ಕಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸಾವು

ಸುಳ್ಯದ ಪರಿವಾರಕಾನದಲ್ಲಿ ವಾಹನ ಡಿಕ್ಕಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸಾವು

- Advertisement -
- Advertisement -

ಸುಳ್ಯ : ಮಹಿಳೆಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಸುಳ್ಯದ ಪರಿವಾರಕಾನದಲ್ಲಿ ನಡೆದಿದೆ.


ಮೃತರನ್ನು ಬಿಳಿಯಾರಿನ ರಾಘವ ಎಂಬವರ ಪತ್ನಿ ಅಮ್ಮಣ್ಣಿ(48) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಅಮ್ಮಣ್ಣಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!