Friday, June 5, 2026
Homeಕರಾವಳಿಅಪಘಾತದಲ್ಲಿ ಗಾಯಗೊಂಡಿದ್ದ ನೆಲ್ಯಾಡಿಯ ನರ್ಸ್ ಸಾವು

ಅಪಘಾತದಲ್ಲಿ ಗಾಯಗೊಂಡಿದ್ದ ನೆಲ್ಯಾಡಿಯ ನರ್ಸ್ ಸಾವು

- Advertisement -
- Advertisement -

ಕಡಬ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನೆಲ್ಯಾಡಿಯ ಪಡ್ಡಡ್ಕ ನಿವಾಸಿಯಾಗಿರುವ ನರ್ಸ್ ರೆಜಿ ಜೋಸೆಫ್ (50)ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಮಂಗಳೂರು ಕಡೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ನಡುವೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಏಪ್ರಿಲ್ 19 ರಂದು ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ರೆಜಿ ಜೋಸೆಫ್, ಅವರ ಪತಿ ಜೋಸೆಫ್, ಮಗ ಹಾಗೂ ಮಗಳು ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ರೆಜಿ ಅವರು ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಅವರ ಪತಿ ಹಾಗೂ ಮಕ್ಕಳು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ರೆಜಿ ಅವರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ರೆಜಿ ಪತಿ, ಮಕ್ಕಳು ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!